ಹಾವೇರಿ ಜಿಲ್ಲೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ವರ್ಗಾವಣೆ ಆದೇಶ ಪ್ರಕಟ
ಹಾವೇರಿ, ಮೇ 27: ಹಾವೇರಿ ಜಿಲ್ಲೆಯ ಗ್ರಾಮ ಆಡಳಿತ ಅಧಿಕಾರಿ (VAO) ವೃಂದದ ನೌಕರರ 2026-27ನೇ ಸಾಲಿನ ಸಾರ್ವತ್ರಿಕ ವರ್ಗಾವಣೆ ಆದೇಶವನ್ನು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಿಸಿದೆ. ಜಿಲ್ಲಾಧಿಕಾರಿ ಕಚೇರಿಯಿಂದ ಹೊರಡಿಸಲಾದ ಆದೇಶದ ಪ್ರಕಾರ, ರಾಜ್ಯ ಸರ್ಕಾರದ ಮಾರ್ಗಸೂಚಿಗಳು ಹಾಗೂ ಕಂದಾಯ ಸಚಿವರ ನಿರ್ದೇಶನದಂತೆ ಆಡಳಿತಾತ್ಮಕ ಹಿತದೃಷ್ಟಿಯಿಂದ ವರ್ಗಾವಣೆ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸರ್ಕಾರದ ಆದೇಶ ಸಂಖ್ಯೆ ಸಿಆಸುಇ:33:ಸೇನೌವ:2026…
